ಕೇಂದ್ರ-ಮಮತಾ ಹಗ್ಗಜಗ್ಗಾಟದ ಮಧ್ಯೆ ಮುಖ್ಯ ಕಾರ್ಯದರ್ಶಿ ನಿವೃತ್ತಿ

Prasthutha|

►ಮುಖ್ಯಮಂತ್ರಿಯ ಮುಖ್ಯ ಸಲಹೆಗಾರರಾಗಿ ನೇಮಕ

- Advertisement -

ಕೇಂದ್ರ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜಗಳದಿಂದ ಬೇಸತ್ತ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಅವರ ರಾಜೀನಾಮೆ ಬೆನ್ನಲ್ಲೇ ಮುಖ್ಯಮಂತ್ರಿಯವರು ತಮ್ಮ ಮುಖ್ಯ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಕೇಂದ್ರಕ್ಕೆ ಸಡ್ಡು ಹೊಡೆದು ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಹಿಂದಕ್ಕೆ ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

- Advertisement -


ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ಮುಖ್ಯಕಾರ್ಯದರ್ಶಿಯವರನ್ನು ಹಿಂದಕ್ಕೆ ಕಳುಹಿಸಬೇಕೆಂಬ ಕೇಂದ್ರದ “ಏಕಪಕ್ಷೀಯ ಆದೇಶ” ದಿಂದಾಗಿ “ಆಘಾತ ಮತ್ತು ದಿಗ್ಭ್ರಮೆಗೊಂಡಿದ್ದೇನೆ” ಎಂದು ತಿಳಿಸಿದ್ದರು.
ಕೇಂದ್ರ ಸರ್ಕಾರವು ನಮಗೆ ಕಳುಹಿಸಿದ ಏಕಪಕ್ಷೀಯ ಆದೇಶದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ಬೆರಗಾಗಿದ್ದೇನೆ, ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿ ಅಲಪನ್ ಬಂಡೋಪಾಧ್ಯಾಯ ಅವರನ್ನು 2021 ರ ಮೇ 28 ರಂದು ಬಿಡುಗಡೆ ಮಾಡುವಂತೆ ಕೇಂದ್ರ ಸೂಚಿಸಿದೆ ಎಂದು ಅವರು ಹೇಳಿದ್ದಾರೆ.


ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇಂದು ಸಂಜೆ ಮುಖ್ಯ ಕಾರ್ಯದರ್ಶಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೇ 31ರಂದು ಸೋಮವಾರ ಬಂಡೋಪಾಧ್ಯಾಯ ನಿವೃತ್ತರಾಗುವವರಿದ್ದರು ಆದರೆ ನಾಲ್ಕು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಅವರ ಸೇವಾವಧಿಯನ್ನು ಮೂರು ತಿಂಗಳ ವಿಸ್ತರಣೆ ಮಾಡಿತ್ತು.

Join Whatsapp