ಕೋಲ್ಕತ್ತಾ: ಕೊರೋನಾ ಸೋಂಕು ಹಾಗೂ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್ ಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.
ಅಲ್ಲದೇ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಲ್ಲಿನ ಸರ್ಕಾರ ಆದೇಶಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ. ಈ ಮೂಲಕ ಕೊರೋನಾ ಮೂರಲೇ ಅಲೆಯ ಹಿನ್ನೆಲೆಯಲ್ಲಿ ಭಾಗಶಃ ಲಾಕ್‌ಡೌನ್‌ನ್ನು ಪಶ್ಚಿಮ ಬಂಗಾಳದಲ್ಲಿ ಘೋಷಿಸಿದಂತಾಗಿದೆ.