ಕೊರೋನಾ ಹೆಚ್ಚಳ: ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಭಾಗಶಃ ಲಾಕ್‌ ಡೌನ್‌ !

Prasthutha|

ಕೋಲ್ಕತ್ತಾ: ಕೊರೋನಾ ಸೋಂಕು ಹಾಗೂ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್ ಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.

- Advertisement -

ಅಲ್ಲದೇ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಲ್ಲಿನ ಸರ್ಕಾರ ಆದೇಶಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ. ಈ ಮೂಲಕ ಕೊರೋನಾ ಮೂರಲೇ ಅಲೆಯ ಹಿನ್ನೆಲೆಯಲ್ಲಿ ಭಾಗಶಃ ಲಾಕ್‌ಡೌನ್‌ನ್ನು ಪಶ್ಚಿಮ ಬಂಗಾಳದಲ್ಲಿ ಘೋಷಿಸಿದಂತಾಗಿದೆ.

Join Whatsapp