ಬಂಗಾಳ ಪಂಚಾಯತ್ ಚುನಾವಣೆ ಮತ ಎಣಿಕೆ ವೇಳೆ ಮತ್ತೆ ಘರ್ಷಣೆ: ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯಲ್ಲಿ ನಡೆಯುತ್ತಿದೆ. ಆದರೂ ಮತ ಎಣಿಕೆ ಕೇಂದ್ರಗಳಲ್ಲಿ ಮತ್ತೆ ಘರ್ಷಣೆ ಏರ್ಪಟ್ಟಿದೆ.

- Advertisement -


ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ನಲ್ಲಿರುವ ಎಣಿಕೆ ಕೇಂದ್ರದ ಹೊರಗೆ ಕಚ್ಚಾಬಾಂಬ್ ಸ್ಫೋಟಗೊಂಡಿರುವುದಾಗಿ ವರದಿಯಾಗಿದೆ. ಮತ್ತೊಂದೆಡೆ ಹೌರಾ ಮತ ಎಣಿಕೆ ಕೇಂದ್ರದಲ್ಲಿ ಕಾರ್ಯಕರ್ತರು ಜಮಾಯಿಸಿ, ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ.


ಕಳೆದ ತಿಂಗಳ ಆರಂಭದಲ್ಲಿ ಪಂಚಾಯತ್ ಚುನಾವಣೆಯ ದಿನಾಂಕವನ್ನು ಘೋಷಿಸಿದಾಗಿನಿಂದ ಪಶ್ಚಿಮ ಬಂಗಾಳದಾದ್ಯಂತ ಭಾರೀ ಘರ್ಷಣೆ ಉಂಟಾಗಿ ಇಲ್ಲಿಯವರೆಗೆ 33 ಜನರು ಸಾವನ್ನಪ್ಪಿದ್ದಾರೆ.

- Advertisement -