ಬೆಂಗಳೂರು: ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್ ಪುನರಾರಂಭ

Prasthutha|

ಬೆಂಗಳೂರು: ದಕ್ಷಿಣ ವಲಯದಲ್ಲಿ ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಜುಲೈ 19ರಂದು ಮತ್ತೆ ಆರಂಭಗೊಂಡಿವೆ.

- Advertisement -

ಈ ಬಗ್ಗೆ ಮಾಹಿತಿ‌ ನೀಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಶ್‌ ಕಿಶೋರ್‌, ಮುಂದಿನ ದಿನಗಳಲ್ಲಿ ಈ ರೀತಿ ಮುಚ್ಚುವುದು ಪುನರಾವರ್ತನೆಗೊಂಡಲ್ಲಿ ಕಾನೂನು ರೀತಿ ಕ್ರಮಕೈಗೊಂಡು, ಪರ್ಯಾಯವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಸಂಸ್ಥೆಯವರಿಗೆ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ.

ಗುತ್ತಿಗೆ ಪಡೆದಿರುವ ಸಂಸ್ಥೆ ಸಲ್ಲಿಸಿರುವ ಬಿಲ್ಲುಗಳಲ್ಲಿ ಬಾಕಿ ಮೊತ್ತ ಅಂದಾಜು 40 ಕೋಟಿ ರೂಪಾಯಿ ಪಾವತಿಸದಿರುವುದರಿಂದ ನೀರು ಹಾಗೂ ವಿದ್ಯುತ್‌ ಬಿಲ್‌ ಪಾವತಿಸಿಲ್ಲ. ಅದರ ಸಂಪರ್ಕ ಕಡಿತಗೊಂಡಿತ್ತು. 2021ರ ನವೆಂಬರ್‌ರಿಂದ ಈವರೆಗೆ ಎಲ್ಲ ಇಂದಿರಾ ಕ್ಯಾಂಟೀನ್‌ಗಳಿಗೆ ಹಣ ಪಾವತಿ ಮಾಡಲಾಗಿದೆ. ಆದರೆ, ದಕ್ಷಿಣ ವಲಯದಲ್ಲಿ
ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಯವರು ಇಂದಿರಾ ಕ್ಯಾಂಟೀನ್‌ ಗಳಲ್ಲಿ ನಾಗರಿಕರಿಗೆ ಒದಗಿಸಿರುವ ಆಹಾರಕ್ಕಿಂತ ಹೆಚ್ಚಿನ ಮೊತ್ತದ ಬಿಲ್‌ ಸಲ್ಲಿಸಿರುವುದರಿಂದ ಅನುದಾನವನ್ನು ಕಡಿತಗೊಳಿಸಲಾಗಿರುತ್ತದೆ ಎಂದು ಮಾಹಿತಿ ಅವರು ನೀಡಿದ್ದಾರೆ.

- Advertisement -

ಒಡಂಬಡಿಕೆಯ ಪ್ರಕಾರ ನೀರು ಮತ್ತು ವಿದ್ಯುತ್ ಬಿಲ್‌ ಅನ್ನು ಸಂಬಂಧಪಟ್ಟ ಸಂಸ್ಥೆಯವರೇ ಪಾವತಿಸಬೇಕಾಗಿರುತ್ತದೆ. ಮುಖ್ಯ ಆರೋಗ್ಯಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಸಂಸ್ಥೆಯವರ ಪ್ರತಿನಿಧಿ, ದಕ್ಷಿಣ ವಲಯ ಆರೋಗ್ಯಾಧಿಕಾರಿ ಗಳೊಂದಿಗೆ ಸಭೆ ನಡೆಸಲಾಗಿದೆ. 11 ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸುವಂತೆ ಸೂಚಿಸಲಾಗಿದೆ ಎಂದು ವಿಕಾಸ್‌ ಹೇಳಿದ್ದಾರೆ.



Join Whatsapp