Home ಟಾಪ್ ಸುದ್ದಿಗಳು ಬೆಂಗಳೂರು: 47 ವೈದ್ಯಕೀಯ ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು: 47 ವೈದ್ಯಕೀಯ ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

28 ಮಂದಿ ಎಮರ್ಜೆನ್ಸಿ ಟ್ರಾಮಾ ಕೇರ್ ಸೆಂಟರ್‌ನಲ್ಲಿ, 15 ಮಂದಿ ಎಚ್. ಬ್ಲಾಕ್ ನಲ್ಲಿ ಮತ್ತು ನಾಲ್ವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲರೂ ತೀವ್ರತರದ ಗ್ಯಾಸ್ಟ್ರೋಎಂಟರೈಟಿಸ್ ಹೊಂದಿರುವುದಾಗಿ ತಿಳಿದು ಬಂದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ಪರೀಕ್ಷೆಗೆ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗೆ ಕಾಯುತ್ತಿದ್ದೇವೆ ಎಂದು ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ ತಿಳಿಸಿದ್ದಾರೆ.

Join Whatsapp
Exit mobile version