4,499 ಅಪಘಾತ, ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮೃತ!
ಬೆಙಗಳೂರು: ನಗರದಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಅಪಘಾತಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿದೆ.ಈ ವರ್ಷದ ಆರಂಭದಿಂದ ನವೆಂಬರ್‌ವರೆಗೆ 4,499 ಅಪಘಾತಗಳು ಸಂಭವಿಸಿದ್ದು, 823 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಬಿಡುಗಡೆ ಮಾಡಿದ ಅಪಘಾತಗಳ ಅಂಕಿ- ಅಂಶಗಳು ತಿಳಿಸಿವೆ.
ಬಳ್ಳಾರಿ ರಸ್ತೆ, ಮೈಸೂರು ರಸ್ತೆ, ಹಳೇ ಮದ್ರಾಸ್ ರಸ್ತೆಗಳಲ್ಲಿ ಅಪಘಾತ ಪ್ರಮಾಣ ಹೆಚ್ಚಿದೆ. ಹೊರವರ್ತುಲ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಬೈಕ್ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಅತೀ ವೇಗದ ಚಾಲನೆ, ನಿರ್ಲಕ್ಷ್ಯ ಹಾಗೂ ಸಂಚಾರ ನಿಯಮ ಉಲ್ಲಂಘನೆಯೇ ಅಪಘಾತಕ್ಕೆ ಕಾರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.