Home ಟಾಪ್ ಸುದ್ದಿಗಳು ಬೆಂಗಳೂರು: ವೃದ್ಧಾಶ್ರಮಕ್ಕೆ ತಂದೆ-ತಾಯಿಯನ್ನು ಸೇರಿಸಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ವೃದ್ಧಾಶ್ರಮಕ್ಕೆ ತಂದೆ-ತಾಯಿಯನ್ನು ಸೇರಿಸಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ನಗರದಲ್ಲಿ ಇನ್ಮುಂದೆ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಸೇರಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಬೆಂಗಳೂರು ನಗರ ಪೊಲೀಸರು ನಿರ್ಧರಿಸಿದ್ದಾರೆ. ಈಗಾಗಲೇ ವೃದ್ಧಾಶ್ರಮಕ್ಕೆ ಸೇರಿಸಿರು ತಂದೆ-ತಾಯಿಗಳನ್ನು ಕರೆದೊಯ್ಯುವಂತೆಯೂ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರ ಪೊಲೀಸರು 2024ರ ಹೊಸ ವರ್ಷದ ನಂತ್ರ ಹೊಸ ಹೆಜ್ಜೆಯನ್ನು ಇಡುತ್ತಿದ್ದಾರೆ. ಅದೇ ಬೆಂಗಳೂರು ನಗರದಲ್ಲಿ ವೃದ್ಧಾಶ್ರಮಕ್ಕೆ ತಂದೆ-ತಾಯಿಗಳನ್ನು ಸೇರಿಸಿದ್ರೆ ಅಂಥವರ ವಿರುದ್ಧ ಕ್ರಿಮನಲ್ ಕೇಸ್ ಬುಕ್ ಮಾಡೋದಕ್ಕೆ ತಯಾರಿ ನಡೆಸಿದ್ದಾರೆ.

ಈಗಾಗಲೇ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಮುಂದಾಗಿದ್ದಾರೆ.

ಇದಷ್ಟೇ ಅಲ್ಲದೇ ಬೆಂಗಳೂರಿನ ವೃದ್ಧಾಶ್ರಮಗಳಲ್ಲಿ ತಮ್ಮ ತಂದೆ-ತಾಯಿಗಳನ್ನು ಮನೆಗೆ ಕರೆದೊಯ್ಯಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸೋ ಎಚ್ಚರಿಕೆಯನ್ನು ನೀಡಿದ್ದಾರೆ.

Join Whatsapp
Exit mobile version