Home ಟಾಪ್ ಸುದ್ದಿಗಳು ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದಿದ್ದ ಮಹಿಳೆ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದಿದ್ದ ಮಹಿಳೆ ಜೈಲಿನಲ್ಲಿ ಆತ್ಮಹತ್ಯೆ

ಬೆಂಗಳೂರು: 9 ಮತ್ತು 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ಮಹಿಳೆ ಗಂಗಾದೇವಿ ಜೈಲಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಗಂಗಾದೇವಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಮಕ್ಕಳು ತನ್ನಂತೆ ಜೀವನದಲ್ಲಿ ಕಷ್ಟ ಪಡಬಾರದು ಎನ್ನುವ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಮಕ್ಕಳಾದ 9 ವರ್ಷದ ಗೌತಮ್ ಮತ್ತು 7 ವರ್ಷದ ಲಕ್ಷ್ಮಿಯನ್ನು ಕೊಲೆ ಮಾಡಿದ್ದ ಗಂಗಾದೇವಿ ಅವರನ್ನು ಪೊಲೀಸರು ಬಂಧಿಸಿದ್ದರು.

ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದ ಗಂಗಾದೇವಿ ತಾಯಿ, ಮಕ್ಕಳೊಂದಿಗೆ ವಾಸವಾಗಿದ್ದರು. ತಾಯಿ ಊರಿಗೆ ಹೋಗಿದ್ದರಿಂದ ಮಕ್ಕಳೊಂದಿಗೆ ಮನೆಯಲ್ಲಿದ್ದ ಗಂಗಾದೇವಿ ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.

Join Whatsapp
Exit mobile version