ಬೆಂಗಳೂರು: ರಾಜ್ಯ ರಾಜಧಾನಿಯ ಪ್ರತಿಷ್ಠಿತ ಖಾಸಗಿ ಹೋಟೆಲ್ನ 19ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಾಧವ್ ನಗರದಲ್ಲಿರುವ ಖಾಸಗಿ ಹೋಟೆಲ್ಗೆ ನಿನ್ನೆ ಬಂದು ರೂಂ ಮಾಡಿಕೊಂಡು ತಂಗಿದ್ದ ತಮಿಳುನಾಡು ಮೂಲದ ಶರಣ್ (28) ಇಂದು 19ನೇ ಮಹಡಿಯಿಂದ ಜಿಗಿದಿದ್ದಾನೆ. ಸ್ಥಳದಲ್ಲೇ ಆತನ ಪ್ರಾಣ ಹೋಗಿದೆ.
ಈ ಹಿಂದೆಯೂ ಶರಣ್ ಇದೇ ಹೋಟೆಲ್ನಲ್ಲಿ ಉಳಿದುಕೊಂಡಿದ್ದನು ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿದ್ದು, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.