ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

Prasthutha|

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವಿಮಾನಕ್ಕೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಿದ ಆರೋಪಿಗಳ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ​​ಪೊಲೀಸ್ ಠಾಣೆಯಲ್ಲಿ 10 ಕೇಸ್​ ದಾಖಲಾಗಿವೆ.

- Advertisement -

ಕಳೆದ ಒಂದು ವಾರದಲ್ಲಿ 10 ಬಾರಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಕಿಡಿಗೇಡಿಗಳು ಅಕ್ಟೋಬರ್​ 22 ರಿಂದ 26ರವರೆಗೆ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.

ಕಿಡಿಗೇಡಿಗಳು ವೆಬ್​​ಸೈಟ್​ ಮತ್ತು ಎಕ್ಸ್ ಖಾತೆ ಮುಖಾಂತರ ವಿಮಾನ ನಿಲ್ದಾಣ ಮತ್ತು ಇಂಡಿಗೋ ಏರ್​ಲೈನ್ಸ್​​ ಸೇರಿದಂತೆ ಹಲವು ಏರ್​ಲೈನ್ಸ್​ಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ದೇವನಹಳ್ಳಿ ಎಸಿಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

- Advertisement -

ಅಕ್ಟೋಬರ್​ 27 ರಂದು ಬೆಂಗಳೂರಿನಿಂದ ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಕಿಡಿಗೇಡಿಗಳು ಬಾಂಬ್​ ಬೆದರಿಕೆ ಸಂದೇಶ ಕಳುಹಿಸಿದ್ದರು. ಬಾಂಬ್​ ಬೆದರಿಕೆ ಸಂದೇಶ ಬರುತ್ತಿದ್ದಂತೆ ವಿಮಾನ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ಬಾಂಬ್​ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್​ ಬೆದರಿಕೆ ಎಂದು ಖಾತರಿಯಾಗಿದೆ.




Join Whatsapp