ಬೆಂಗಳೂರು:  ಮಹಿಳೆಯ ಬಟ್ಟೆ ಬಿಚ್ಚುವಂತೆ ವಿಮಾನ ನಿಲ್ದಾಣ ಸಿಬ್ಬಂದಿಯಿಂದ ಒತ್ತಾಯ!

Prasthutha|

ಬೆಂಗಳೂರು: ಭದ್ರತಾ ತಪಾಸಣೆ ವೇಳೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದು ಈ ಬಗ್ಗೆ ಸಂತ್ರಸ್ತ ಮಹಿಳೆ ತಮಗಾದ ಅವಮಾನದ ಬಗ್ಗೆ ಮತ್ತು  ಸಿಬ್ಬಂದಿಯ ವರ್ತನೆಯನ್ನು ಖಂಡಿಸಿದ್ದಾರೆ.

- Advertisement -

ತಪಾಸಣೆ ವೇಳೆ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಬಟ್ಟೆ ತೆಗೆಯುವಂತೆ ಹೇಳಿದ್ದಾಗಿ ಸಂಗೀತಗಾರ್ತಿಯೊಬ್ಬರು ಆರೋಪಿಸಿದ್ದು, ‘ನಿಜವಾಗಿಯೂ ಇದು ಅವಮಾನಕರ’ ಅನುಭವ. ‘ಮಹಿಳೆಯರೇಕೆ ಬಟ್ಟೆ ಬಿಚ್ಚಬೇಕು’ ಎಂದು ತಮ್ಮ ಟ್ವಿಟರ್ ಖಾತೆ ಮೂಲಕ ಪ್ರಶ್ನಿಸಿದ್ದಾರೆ.

ವಿಮಾನ ನಿಲ್ದಾಣ ಸಿಬ್ಬಂದಿಯ ಈ ವರ್ತನೆಯಿಂದ ನನಗೆ ಬಹಳ ಮುಜುಗರ ಹಾಗೂ ಅವಮಾನವಾಗಿದೆ. ಕೇವಲ ಕ್ಯಾಮಿಸೋಲ್ (ಮಹಿಳೆಯರು ಧರಿಸುವ ಉಡುಪು) ಧರಿಸಿ ಭದ್ರತಾ ಪರಿಶೀಲನೆ ಕೇಂದ್ರದ ಬಳಿ ನಿಂತು ಮಹಿಳೆಯರಿಗೆ ಕಿರಿಕಿರಿ ಉಂಟುಮಾಡುವ ರೀತಿಯ ವರ್ತನೆಗಳನ್ನು ಎದುರಿಸುವುದು ಅವಮಾನಕರ ಸಂಗತಿಯಾಗಿದೆ. ಭದ್ರತಾ ಪರಿಶೀಲನೆ ವೇಳೆ ಮಹಿಳೆಯರು ಶರ್ಟ್ ನ್ನು ಯಾಕೆ ತೆಗೆಯಬೇಕು? ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ವೀಟ್ ಖಾತೆಗೆ ಟ್ಯಾಗ್ ಮಾಡಿ ಮಹಿಳೆ ಅಸಮಾಧಾನ ಹೊರ ಹಾಕಿದ್ದಾರೆ.

- Advertisement -

ಘಟನೆಗೆ ವಿಷಾದ ವ್ಯಕ್ತಪಡಿಸಿದ ಅಧಿಕಾರಿಗಳು

ಈ  ಘಟನೆ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದ ಭದ್ರತೆಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಿರ್ವಹಿಸುತ್ತಿದ್ದು, ಕಾರ್ಯಾಚರಣೆ ಮತ್ತು ಭದ್ರತಾ ತಂಡಗಳಿಗೆ ಸಮಸ್ಯೆಯ ಬಗ್ಗೆ ವಿವರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Join Whatsapp