ಬೆಂಗಳೂರು ಬಂದ್: ನಗರದಲ್ಲಿ ಎಂದಿನಂತೆ ಬಿಎಂಟಿಸಿ ಬಸ್‌, ಖಾಸಗಿ ವಾಹನ ಸಂಚಾರ

Prasthutha|

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಸೇರಿದಂತೆ ಹಲವು ಸಂಘಟನೆಗಳು ಇಂದು ಬೆಂಗಳೂರು ಬಂದ್​ಗೆ ಕರೆ ನೀಡಿವೆ.

- Advertisement -

ಆದರೆ ಇಂದು ಬೆಳಗ್ಗೆ ಬಿಎಂಟಿಸಿ, ಕೆಎಸ್ಆರ್​ಟಿಸಿ ಮಾತ್ರವಲ್ಲದೇ ಖಾಸಗಿ ವಾಹನಗಳು ಸಹ ಸಂಚರಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬಂತು. ಬಂದ್​ಗೆ ಕರೆ ನೀಡಿರುವುದರ ನಡುವೆಯೂ ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವೆಡೆ ಬಸ್‌ಗಳು, ಆಟೋಗಳು, ಗೂಡ್ಸ್ ವಾಹನ ಸೇರಿದಂತೆ ಅನೇಕ ವಾಹನಗಳ ಓಡಾಟ ಸಾಗುತ್ತಿದೆ.

ಬಿಎಂಟಿಸಿ ಹಾಗೂ ಕೆಎಸ್‍ಆರ್​ಟಿಸಿ ನೌಕರರ ಸಂಘದಿಂದ ಬಂದ್​ಗೆ ಬೆಂಬಲ ನೀಡುವುದಾಗಿ ತಿಳಿಸಲಾಗಿತ್ತು. ಮಂಗಳವಾರ ಬಿಎಂಟಿಸಿ ಬಸ್‍ಗಳನ್ನು ರಸ್ತೆಗೆ ಇಳಿಸಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಾವು ಬೆಂಬಲ ನೀಡುತ್ತೇವೆ. ನಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಿದರೂ ಪರವಾಗಿಲ್ಲ. ಬೆಳಗ್ಗೆ 6 ರಿಂದ ಸಂಜೆ 6ವರೆಗೆ ಬಸ್​​ಗಳನ್ನು ರಸ್ತೆಗೆ ಇಳಿಸಲ್ಲ ಎಂದು ಸಂಘ ಹೇಳಿತ್ತು. ಆದರೆ ಇದೀಗ ಬಿಎಂಟಿಸಿ ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಸ್ಪಷ್ಟಪಡಿಸಿದೆ.

Join Whatsapp