ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಸೇರಿದಂತೆ ಹಲವು ಸಂಘಟನೆಗಳು ಇಂದು ಬೆಂಗಳೂರು ಬಂದ್ಗೆ ಕರೆ ನೀಡಿವೆ.
ಆದರೆ ಇಂದು ಬೆಳಗ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಮಾತ್ರವಲ್ಲದೇ ಖಾಸಗಿ ವಾಹನಗಳು ಸಹ ಸಂಚರಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬಂತು. ಬಂದ್ಗೆ ಕರೆ ನೀಡಿರುವುದರ ನಡುವೆಯೂ ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವೆಡೆ ಬಸ್ಗಳು, ಆಟೋಗಳು, ಗೂಡ್ಸ್ ವಾಹನ ಸೇರಿದಂತೆ ಅನೇಕ ವಾಹನಗಳ ಓಡಾಟ ಸಾಗುತ್ತಿದೆ.
ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನೌಕರರ ಸಂಘದಿಂದ ಬಂದ್ಗೆ ಬೆಂಬಲ ನೀಡುವುದಾಗಿ ತಿಳಿಸಲಾಗಿತ್ತು. ಮಂಗಳವಾರ ಬಿಎಂಟಿಸಿ ಬಸ್ಗಳನ್ನು ರಸ್ತೆಗೆ ಇಳಿಸಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಾವು ಬೆಂಬಲ ನೀಡುತ್ತೇವೆ. ನಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಿದರೂ ಪರವಾಗಿಲ್ಲ. ಬೆಳಗ್ಗೆ 6 ರಿಂದ ಸಂಜೆ 6ವರೆಗೆ ಬಸ್ಗಳನ್ನು ರಸ್ತೆಗೆ ಇಳಿಸಲ್ಲ ಎಂದು ಸಂಘ ಹೇಳಿತ್ತು. ಆದರೆ ಇದೀಗ ಬಿಎಂಟಿಸಿ ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಸ್ಪಷ್ಟಪಡಿಸಿದೆ.