ನಾಳೆ ಬೆಂಗಳೂರು ಬಂದ್: ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ನಾಳೆ ನಡೆಯಬೇಕಿದ್ದ ಕಾನೂನು ವಿವಿ ಪರೀಕ್ಷೆಗಳು ಮುಂದೂಡಿಕೆ

- Advertisement -

ಬೆಂಗಳೂರು: ನಾಳೆ ಬೆಂಗಳೂರು ಬಂದ್ ಹಿನ್ನೆಲೆ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಪ್ರಕಟನೆ ಹೊರಡಿಸಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ತಮಿಳುನಾಡಿಗೆ “ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಘೋಷಿಸಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.

- Advertisement -

ಕಾನೂನು ವಿವಿ ಪರೀಕ್ಷೆಗಳು ಮುಂದೂಡಿಕೆ

ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿರುವುದರಿಂದ ಸಂಚಾರದಲ್ಲಿ ಅಸ್ತವ್ಯಸ್ಥವಾಗಲಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

ಕಾನೂನು ವಿಶ್ವವಿದ್ಯಾಲಯದ ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ಕರ್ನಾಟಕ ರಾಜ್ಯ ಕಾನೂನು ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರಕ್ಕೂ ಅಡಚಣೆ ಉಂಟಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ. ಇದನ್ನು ತಪ್ಪಿಸಲು ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಕಾನೂನು ವಿಶ್ವವಿದ್ಯಾಲಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆ ಮುಂದೂಡಿಕೆಗೆ ನಿರ್ಧಾರ ಮಾಡಲಾಗಿದೆ.

Join Whatsapp