ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ

Prasthutha|

ಬೆಂಗಳೂರು: ಮಹಿಳಾ ಅಧಿಕಾರಿ ಅವರ ಮನೆಗೇ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ(37) ಕೊಲೆಯಾದವರು. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

ಪ್ರತಿಮಾ ಒಂಟಿಯಾಗಿ ವಾಸ ಮಾಡುತ್ತಿದ್ದು, ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಪ್ರತಿಮಾ ಪತಿಯಿಂದ ವಿಚ್ಛೇದನ ಪಡೆದು ಒಂಟಿಯಾಗಿ ನೆಲೆಸಿದ್ದರು.




Join Whatsapp