Home ಟಾಪ್ ಸುದ್ದಿಗಳು ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ

ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ

ಬೆಂಗಳೂರು: ಮಹಿಳಾ ಅಧಿಕಾರಿ ಅವರ ಮನೆಗೇ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ(37) ಕೊಲೆಯಾದವರು. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರತಿಮಾ ಒಂಟಿಯಾಗಿ ವಾಸ ಮಾಡುತ್ತಿದ್ದು, ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಪ್ರತಿಮಾ ಪತಿಯಿಂದ ವಿಚ್ಛೇದನ ಪಡೆದು ಒಂಟಿಯಾಗಿ ನೆಲೆಸಿದ್ದರು.

Join Whatsapp
Exit mobile version