ಬೆಂಗಳೂರು: ‘ಬ್ಯಾರೀಸ್ ಸೌಹಾರ್ದ ಭವನ’ ಉದ್ಘಾಟನೆ

Prasthutha|

ಬೆಂಗಳೂರು: ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಮೂಲಕ ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಬ್ಯಾರೀಸ್ ಸೌಹಾರ್ದ ಭವನ ಇಂದು ಲೋಕಾರ್ಪಣೆಗೊಂಡಿದೆ.
ಬೆಂಗಳೂರಿನ ಎಚ್ ಬಿ ಆರ್ ಲೇಔಟ್ ನ ಬಿಡಿಎ ಕಾಂಪ್ಲೆಕ್ಸ್ ನ ಎದುರುಗಡೆ ನಿರ್ಮಿಸಲ್ಪಟ್ಟ ‘ಬ್ಯಾರೀಸ್ ಸೌಹಾರ್ದ ಭವನ’ ಮತ್ತು ಮಾಜಿ ಸಚಿವ ಬಿ.ಎ. ಮೊಹಿದಿನ್ ಸ್ಮಾರಕ ಆಡಿಟೋರಿಯಂ ಅನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

- Advertisement -


ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಮುಂದಾಳುತ್ವದಲ್ಲಿ ಬ್ಯಾರೀಸ್ ಗ್ರೂಪ್ನ ಸೈಯ್ಯದ್ ಮೊಹಮ್ಮದ್ ಬ್ಯಾರಿ ಅವರ ಉಸ್ತುವಾರಿಯಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ.


2015ರ ನವೆಂಬರ್‌ನಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರೇ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂಧನ ಖಾತೆಯ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಪರಿಷತ್ನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಬ್ಯಾರಿ ಸೌಹಾರ್ದ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಪಾಲ್ಗೊಂಡಿದ್ದರು.

Join Whatsapp