ಬೆಂಗಳೂರು: 12 ಪಬ್, ಬಾರ್ ಗಳಿಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು.
ನಿಯಮ ಪಾಲಿಸದ 12 ಪಬ್, ಬಾರ್ಗಳಿಗೆ ಬೀಗ ಜಡಿದರು.

- Advertisement -


ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಯಿತು. ನ್ಯೂನತೆಗಳು ಕಂಡುಬಂದಿರುವ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ.



Join Whatsapp