ಬೆಂಗಳೂರು: 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

Prasthutha|

ಬೆಂಗಳೂರು: ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

- Advertisement -


ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

Join Whatsapp