ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು UAPA ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (UAPA) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ ಗ್ರಾಹಕರು, ಹೋಟೆಲ್ ಸಿಬ್ಬಂದಿ ಸೇರಿ 10 ಗಾಯಗೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.