ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಶಂಕಿತ ಆರೋಪಿ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ನಾಲ್ಕು ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಟಿ–ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುವ ಆರೋಪಿಯು ತಲೆಗೆ ಕ್ಯಾಪ್ ಹಾಗೂ ಮುಖಕ್ಕೆ ಮಾಸ್ಕ್ ಹಾಕಿರುವುದನ್ನು ಕಾಣಬಹುದಾಗಿದೆ.
ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.
NIA seeks citizen cooperation in identifying the suspect linked to the #RameswaramCafeBlastCase. 📞 Call 08029510900, 8904241100 or email to [email protected] with any information. Your identity will remain confidential. #BengaluruCafeBlast pic.twitter.com/ISTXBZrwDK
— NIA India (@NIA_India) March 9, 2024