Home ಟಾಪ್ ಸುದ್ದಿಗಳು ಬೆಂಗಳೂರು ಕೆಫೆ ಸ್ಫೋಟ: ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು ಕೆಫೆ ಸ್ಫೋಟ: ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.

ಕೆಫೆಯಲ್ಲಿ ನಿನ್ನೆ(01) ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ. ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Join Whatsapp
Exit mobile version