ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡುವಂತೆ ಇಡೀ ಕರ್ನಾಟಕ ಆಗ್ರಹಿಸುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್ ನಿಂದ ಸ್ಫೋಟ ಸಂಭವಿಸಿದೆ. ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿತ್ತು. ಹೀಗಾಗಿ ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಕರ್ನಾಟಕ ಆಗ್ರಹ ಮಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.