Home ಟಾಪ್ ಸುದ್ದಿಗಳು ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ

ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ

►ಬೇಡಿಕೆಗಳು ಏನೇನು?

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.


ಬೇಡಿಕೆಗಳು ಏನೇನು?

ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು

  1. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು
  2. ಎಲ್ಲಾ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು
  3. ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.
Join Whatsapp
Exit mobile version