ಬೆಂಗಳೂರು ಕಾಲೇಜಿನಲ್ಲಿ ಸಿಖ್ ವಿದ್ಯಾರ್ಥಿನಿಗೆ ಟರ್ಬನ್ ಧರಿಸಲು ಅವಕಾಶ ನಿರಾಕರಣೆ: ಕ್ಯಾಂಪಸ್ ಫ್ರಂಟ್ ಖಂಡನೆ

Prasthutha|

ಬೆಂಗಳೂರು: ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಸಿಖ್ ಸಮುದಾಯದ ವಿದ್ಯಾರ್ಥಿನಿಗೆ ಸಾಂವಿಧಾನಿಕ ಹಕ್ಕಾದ ಟರ್ಬನ್  ಧರಿಸಲು ನಿರಾಕರಿಸಿರುವುದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಖಂಡಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ,  ಬೆಂಗಳೂರಿನ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ವಿದ್ಯಾರ್ಥಿನಿಗೆ ಟರ್ಬನ್ ಧರಿಸಲು ಕಾಲೇಜು ಆಡಳಿತ ಮಂಡಳಿ ತಡೆಯೊಡ್ಡಿದ್ದು, ಇದು ವೈಯಕ್ತಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಪದೇ ಪದೇ ದುರುಪಯೋಗಪಡಿಸುತ್ತಿರುವ ಇಂತಹ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಮವಸ್ತ್ರದ ಹೆಸರಿನಲ್ಲಿ ಸಾಂವಿಧಾನಿಕ ಹಕ್ಕುಗಳ ದಮನವು ದೇಶದ ಏಕತೆಗೆ ಧಕ್ಕೆಯಾಗಿದೆ. ಸಿಖ್ ಸಮುದಾಯದ ಧಾರ್ಮಿಕ ಮೂಲಭೂತ ಹಕ್ಕುಗಳನ್ನು ಅನುಸರಿಸಲು ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ವಿಶೇಷವಾಗಿ ಅನುಮತಿಸಿರುವಾಗ ರಾಜ್ಯ ಸರಕಾರದ ಅಚಾತುರ್ಯ ಮತ್ತು ಕಾಲೇಜುಗಳಲ್ಲಿ ಅಲ್ಪಸಂಖ್ಯಾತರಿಗೆ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ.  ತಕ್ಷಣ ನ್ಯಾಯಾಲಯ ಮಧ್ಯ ಪ್ರವೇಶಿಸಿ ವೈಯಕ್ತಿಕ ಸ್ವಾತಂತ್ರ್ಯವನ್ನು ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಖಾತರಿಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.



Join Whatsapp