ಬೆಂಗಳೂರು ಡಬಲ್ ಮರ್ಡರ್ ಪ್ರಕರಣ: ಮೂವರು ಆರೋಪಿಗಳ ಬಂಧನ

Prasthutha|

ಫಿಲೆಕ್ಸ್, ಶಿವು, ವಿನಯ್ ರೆಡ್ಡಿ ಬಂಧಿತ ಆರೋಪಿಗಳು

- Advertisement -


ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.


ಶಿವಮೊಗ್ಗ ಮೂಲದ ಫಿಲೆಕ್ಸ್, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ ಬಂಧಿತ ಆರೋಪಿಗಳು. ನಿನ್ನೆ(ಜು.11) ಸಂಜೆ ಪಂಪಾ ಬಡಾವಣೆಯಲ್ಲಿರುವ ಏರೋನಿಕ್ಸ್ ಇಂಟರ್ನೆಟ್ ಕಂಪನಿಗೆ ಆಗಮಿಸಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿ ಪರಾರಿಯಾಗಿದ್ದರು. ಇದೀಗ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

Join Whatsapp