Home ಟಾಪ್ ಸುದ್ದಿಗಳು ಬೆಂಗಳೂರು: ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ

ಬೆಂಗಳೂರು: ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ

ಬೆಂಗಳೂರು: ಬೆಳ್ಳಂದೂರಿನ ಖಾಸಗಿ ಶಾಲೆಯೊಂದರ ಮುಂಭಾಗದ ಖಾಲಿ ಜಮೀನಿನಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.


ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.


ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಟ್ಟಿರುವುದು ಕಂಡು ಬಂದಿದ್ದು ಮೇಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದರೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version