ಬೆಂಗಳೂರು: ರಾಜಾಜಿನಗರದಲ್ಲಿ ಬೆಂಕಿ ಅನಾಹುತ| ಚಹಾ ಅಂಗಡಿ ಭಸ್ಮ

Prasthutha|

ಬೆಂಗಳೂರು: ಚಹಾ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್‌ ರೋಡ್‌ ಸಮೀಪ ನಡೆದಿದೆ.

- Advertisement -

ರವಿ ಎಂಬವರಿಗೆ ಸೇರಿದ ಚಹಾದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ.

- Advertisement -

ಬೆಂಕಿ ಹತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಅಗ್ನಿ ನಂದಿಸುವ ಕಾರ್ಯ ನಡೆಸಿದರೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಕಳೆದ 20 ವರ್ಷಗಳಿಂದ ಟೀ ಸ್ಟಾಲ್ ನಡೆಸುತ್ತಿದ್ದ ರವಿ ಅವರು, ಕಳೆದ ಮೂರು ದಿನಗಳಿಂದ ಅಂಗಡಿ ಬಂದ್ ಮಾಡಿ ಮಂಗಳೂರಿಗೆ ತೆರಳಿದ್ದು, ಜ.26ರಂದು ಸಂಜೆ ಎಂಟು ಗಂಟೆ ಸುಮಾರಿಗೆ ಅಂಗಡಿಗೆ ಬೆಂಕಿ ಹತ್ತಿಕೊಂಡಿದೆ.

ಸ್ಥಳಕ್ಕೆ ಮಾಗಡಿ ರಸ್ತೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

Join Whatsapp