ಬೆಂಗಳೂರು: ಪಟಾಕಿ ಸಂಬಂಧಿತ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರಗೆ 17 ಜನ ದಾಖಲಾಗಿದ್ದರೆ, 26 ಜನ ಖಾಸಗಿ ಆಸ್ಪತ್ರೆ ಬಾಗಿಲು ತಟ್ಟಿದ್ದಾರೆ.
ದೀಪಾವಳಿಯ ಮೊದಲ ದಿನ ಅಂದರೆ ನರಕ ಚತುರ್ದಶಿಯಂದು (ನವೆಂಬರ್ 12) ಮಕ್ಕಳು ಸೇರಿದಂತೆ 26 ಜನರು ಗಾಯಗೊಂಡಿದ್ದರು. ಇದೀಗ ದೀಪಾವಳಿ 2ನೇ ದಿನ ಅಮಾವಸ್ಯೆಯಂದು (ನವೆಂಬರ್ 13) ಗಾಯಗೊಂಡವರ ಸಂಖ್ಯೆ 26ರಿಂದ 43ಕ್ಕೆ ಏರಿಕೆಯಾಗಿದೆ.