ಬೆಂಗಳೂರು: ಪೋರ್ನ್ ವಿಡಿಯೋ ಮಾಡಿ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುತ್ತಿದ್ದ ನಾಲ್ವರ ಬಂಧನ

Prasthutha|

ಬೆಂಗಳೂರು: ಹಣದಾಸೆಗೆ ಪೋರ್ನ್ ವಿಡಿಯೋಗಳ ಚಿತ್ರೀಕರಣ ಮಾಡಿ ವೆಬ್‌ಸೈಟ್‌ಗಳಿಗೆ ಅಪ್ಲೋಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ.

- Advertisement -

ಸೌಮ್ಯಾ, ರವಿ, ರೇಣುಕ, ರಮೇಶ ಎಂಬುವವರು ಬಂಧಿತರು. ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿನ 5ನೇ ಮುಖ್ಯರಸ್ತೆಯಲ್ಲಿ ಬಾಡಿಗೆ ಮನೆಯೊಂದನ್ನು ಲೀಸ್‌ಗೆ ಪಡೆದು ಪೋರ್ನ್‌ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ, ವೆಬ್‌ಸೈಟ್‌ಗಳಿಗೆ ಅಪ್ಲೋಡ್ ಮಾಡಿ ಹಣ ಗಳಿಸುತ್ತಿದ್ದರು.

ಸೌಮ್ಯಾ ಹಾಗೂ ರವಿ ಇಬ್ಬರು ಪೋರ್ನ್ ನಟರು. ರೇಣುಕ, ರಮೇಶ್ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು.

- Advertisement -

ಬಾಡಿಗೆ ಮನೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ವಿಡಿಯೋ ಮಾಡುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಬಗ್ಗೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.



Join Whatsapp