ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡೈರಿ ಸರ್ಕಲ್ ಸಮೀಪದ ಮಹಾಲಿಂಗೇಶ್ ಬಡಾವಣೆಯಲ್ಲಿ ಗುರುವಾರ ನಡೆದಿದೆ.
ಸಿಲಿಂಡರ್ ಪಕ್ಕದಲ್ಲೇ ಮಲಗಿದ್ದ ರವಿ (45) ಎಂಬಾತ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ಎಂದಿನಂತೆ ಅಡುಗೆ ಭಟ್ಟರು ಟಿಫನ್ ಗೆ ತಯಾರಿ ಮಾಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಮೊದಲ ಮಹಡಿಯಲ್ಲಿ ಅಡುಗೆ ಮಾಡುತ್ತಿದ್ದ ನಾಗರಾಜ್ ಹಾಗೂ ರೋಮಯ್ಯ ಚೋರ್ಲಾ ಗಂಭೀರ ಗಾಯಗೊಂಡಿದ್ದಾರೆ. ಮೂಲತಃ ಇವರು ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ.