ಬೆಂಗಳೂರು ಯುವತಿಯ ಮೇಲೆ ಅತ್ಯಾಚಾರ ಪ್ರಕರಣ : ಮತ್ತೊರ್ವ ಆರೋಪಿಗೆ ಶೂಟ್ ಔಟ್

Prasthutha|

ಬೆಂಗಳೂರು : ಬಾಂಗ್ಲಾ ದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಆರೋಪಿಗೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಬುಧವಾರ ಗುಂಡಿಟ್ಟು ಬಂಧಿಸಿದ್ದಾರೆ.ಪೊಲೀಸರ ಗುಂಡೇಟು ತಗುಲಿ ಕಾಲಿಗೆ ಗಾಯಗೊಂಡ ಪ್ರಮುಖ ಆರೋಪಿ ಬಾಂಗ್ಲಾ ಮೂಲದ ಶೂಬೂಜ್ ಅಲಿಯಾಸ್ ಮಹಮ್ಮದ್ ಶೇಖ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

- Advertisement -

ಕೆ.ಆರ್. ಪುರಂ ಬಳಿಯ ರಾಂಪುರ ಕೆರೆ ಬಳಿ ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಗುಂಡು ಹಾರಿಸಿ ಬಂಧಿಸಲಾಗಿದೆ.  ಆರೋಪಿ ಶೂಬೂಜ್ ಯುವತಿಗೆ ಕ್ರೂರವಾಗಿ ಹಿಂಸೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಯ ನೆಪದಲ್ಲಿ ಜೀಪಿನಿಂದ ಕೆಳಗಡೆ ಇಳಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಇಲ್ಲಿಯವರೆಗೆ ಒಟ್ಟು 10 ಜನ ಆರೋಪಿಗಳ ಬಂಧನವಾಗಿದೆ.

- Advertisement -

Join Whatsapp