ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾದ ಹಿಂದೂ ಮಹಾಸಭಾ ಮುಖಂಡ

Prasthutha|

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಹಿಂದೂ ಮಹಾಸಭಾ ಅಧ್ಯಕ್ಷರಾಗಿದ್ದ ವಿ.ಕದಿರೇಶಿಯವರು ಶಾಸಕ ಬಿಕೆ ಸಂಗಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

- Advertisement -

ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಬಿಜೆಪಿ ಮುಖಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಭದ್ರಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವೇಳೆ ಪಕ್ಷದ ವಿಪ್ ಉಲ್ಲಂಘನೆ ಆರೋಪದ ಮೇಲೆ ವಾರದ ಹಿಂದೆ ಉಚ್ಛಾಟನೆಗೊಂಡಿದ್ದ ಮೂವರು ಬಿಜೆಪಿ ಸದಸ್ಯರು ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 

- Advertisement -

ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ‌ನೀಡಿರುವ ಸಿಎಂ, ಶಾಸಕರಾದ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಭದ್ರಾವತಿ‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷರಾಗಿದ್ದ ನಗರಸಭಾ ಸದಸ್ಯ ವಿ.ಕದಿರೇಶಿ ಹಾಗೂ ಅವರ ಪುತ್ರ ಬಿಜೆಪಿಯ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಮಂಜುನಾಥ್, ಬಿಜೆಪಿಯ ಹಾಲಿ ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು, ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.



Join Whatsapp