ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ ಕಂಪನಿಗೆ ಸಂಬಂಧಿಸಿದ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು ಆಗಮಿಸಿದ್ದಾರೆ.