Home ಟಾಪ್ ಸುದ್ದಿಗಳು ಬೆಂಗಳೂರು: ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು. ದೇವಾಲಯವನ್ನು ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿದೆ.


ಉದ್ಘಾಟನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗಾಂಧೀಜಿ ಪ್ರಾಣ ಬಿಡುವಾಗಲೂ ಹೇ ರಾಮ್ ಎಂದು ಪ್ರಾಣ ಬಿಟ್ಟರು. ನಾವು ಗಾಂಧೀಜಿಯವರ ರಾಮನನ್ನು ಪೂಜಿಸುತ್ತೇವೆ. ಬಿಜೆಪಿಯ ರಾಮನನ್ನು ಪೂಜಿಸಲ್ಲ. ನಾವೆಲ್ಲ ರಾಮನ ಭಕ್ತರೆ, ಆದರೆ ಬಿಜೆಪಿಯವರು ಹೇಳುವಂತೆ ಅಲ್ಲ. ಅಯೋಧ್ಯೆಗೆ ಹೋಗುತ್ತೇವೆ ಎಂದರು.


ಈ ದೇವಾಲಯ ರಾಜಕಾರಣಕ್ಕೊಸ್ಕರ ಮಾಡಿಲ್ಲ, ರಾಜ್ಯದಲ್ಲಿ ಬಹಳಷ್ಟು ರಾಮನ ದೇವಾಲಯ ಇದೆ. ನಾನು ರಾಮನ ದೇವಸ್ಥಾನ ಕಟ್ಟಿಸಿದ್ದೇನೆ. ನಾನು ಅಯೋಧ್ಯೆಗೇ ಹೋಗುತ್ತೇನೆ. ಆದರೆ ಎಲ್ಲಕಡೆ ರಾಮನ ಮೂರ್ತಿ ಒಂದೇ ಅಲ್ವಾ? ಅಯೋಧ್ಯೆಯಲ್ಲಿ ಪೂಜೆ ಮಾಡಿದರು ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರು ಒಂದೆ ಎಂದು ಹೇಳಿದರು.

Join Whatsapp
Exit mobile version