ಬೆಂಗಳೂರು: ಲಾಲ್​ ಬಾಗ್ ಫ್ಲವರ್ ಶೋ ದಿನಾಂಕ ನಿಗದಿ

Prasthutha|

ಬೆಂಗಳೂರು: ಬೆಂಗಳೂರಿನ ಲಾಲ್‌ ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಜನರು ಕಾತರದಿಂದ ಇರುತ್ತಾರೆ.

- Advertisement -

ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್ ಬಾಗ್​​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ಆಗಸ್ಟ್ 8 ರಿಂದ 19 ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

ವಿದೇಶಿ ಹಾಗೂ ಸ್ವದೇಶಿ ಹೂಗಳಿಂದ ಈ ಬಾರಿಯ ಫ್ಲವರ್ ಶೋ ಕಂಗೊಳಿಸಲಿದೆ.

- Advertisement -

ಫ್ಲವರ್ ಶೋನಲ್ಲಿ 60ಕ್ಕೂ ಹೆಚ್ಚು ಬಗೆಯ ಹೂಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಒಟ್ಟು 15 ಲಕ್ಷದಷ್ಟು ಹೂಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.



Join Whatsapp
Exit mobile version