ಬೆಂಗಳೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.
ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾಕೇಶ್ ಕ್ರೌರ್ಯದ ಸುದ್ದಿ ಕೇಳಿ ಅಕ್ಕಪಕ್ಕದ ಜನ ಬೆಚ್ಚಿಬಿದ್ದಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ ದೊಡ್ಡಕಮ್ಮನಹಳ್ಳಿ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ, ಏಕೆ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿದಲ್ಲ. ಇದೀಗ ಹುಳಿಮಾವು ದೊಡ್ಡಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಪತಿ ರಾಕೇಶ್ ಪತ್ನಿ ಗೌರಿಯನ್ನು ಕೊಂದು ಬಳಿಕ ಆಕೆಯ ಮೃತದೇಹವನ್ನು ತುಂಡರಿಸಿ ಸೂಟ್ಕೇಸ್ಗೆ ತುಂಬಿಟ್ಟಿದ್ದಾನೆ. ಬಳಿಕ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ತಿಳಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ರಾಕೇಶ್ ಕೃತ್ಯವನ್ನು ತಿಳಿಸಿದ್ದಾರೆ. ಕೂಡಲೇ ಮಹಾರಾಷ್ಟ್ರ ಪೊಲೀಸರು ಹುಳಿಮಾವು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಈ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ ಪರಿಶೀಲನೆ ನಡೆಸಿದ್ದಾರೆ.
ತಿಂಗಳ ಹಿಂದಷ್ಟೇ ರಾಕೇಶ್, ಗೌರಿ ಈ ಮನೆಗೆ ಬಾಡಿಗೆ ಬಂದಿದ್ದು, ನಿನ್ನೆ (ಮಾರ್ಚ್ 26) ರಾತ್ರಿ 12.30ಕ್ಕೆ ಕೃತ್ಯವೆಸಗಿ ಮನೆಯಿಂದ ಹೊರಬಂದಿದ್ದ ಪರಾರಯಾಗಿದ್ದಾನೆ. ಇನ್ನು ಮನೆಯಿಂದ ಹೋಗುವ ಮುನ್ನ ರಾಕೇಶ್, ಅದೇ ಕಟ್ಟಡದಲ್ಲಿ ನೆಲೆಸಿದ್ದ ಮತ್ತೊಬ್ಬರಿಗೆ ಕರೆ ಮಾಡಿ ನನ್ನ ಪತ್ನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಇದರಿಂದ ಹೆದರಿದ ಬಾಡಿಗೆ ಮನೆ ನಿವಾಸಿ ಮಾಲೀಕರಿಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹುಳಿಮಾವು ಪೊಲೀಸರು ಸಿಡಿಆರ್ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲಿಸರ ವಶದಲ್ಲಿರುವ ರಾಕೇಶ್ ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳುತ್ತಿದ್ದು, ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ಬೆಂಗಳೂರಿಗೆ ಕರೆತರಲಿದ್ದಾರೆ. ನಂತರ ಪತ್ನಿಯ ಹತ್ಯೆ ಮಾಡಿದ ಕಾರಣ ತಿಳಿದುಕೊಳ್ಳಲು ಪೊಲೀಸರು ಆತನನನ್ನು ವಿಚಾರಣೆ ನಡೆಸಲಿದ್ದಾರೆ.