Home ಟಾಪ್ ಸುದ್ದಿಗಳು ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ವ್ಯಕ್ತಿ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ವ್ಯಕ್ತಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಕಾರ್ಮಿಕ ಸಾವನ್ನಪ್ಪಿದ ದುರಂತ ನಡೆದಿದೆ.ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಮಣ್ಣಿನ ಅವಶೇಷಗಳ ಅಡಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವರನ್ನು ರಕ್ಷಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾರೆ.ಬಿಹಾರದ ಸೋಂಪುರ ಮೂಲದ ರಂಜನ್ ಮೃತ ವ್ಯಕ್ತಿ. ಇನ್ನೋರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version