ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಬೆಂಗಳೂರು: ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ರಾಜಸ್ಥಾನ ಮೂಲದ ಲೋಕೇಂದ್ರನಾಥ್ ಕುಮಾರ್ ಸಿಂಗ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ ಪ್ರಾಯೋಗಿಕ ಪರೀಕ್ಷೆ ಮುಗಿಸಿ, ಮಧ್ಯಾಹ್ನ ಹಾಸ್ಟೆಲ್ಗೆ ಬಂದು ತನ್ನ ಕೊಠಡಿಯ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Join Whatsapp