Home ಟಾಪ್ ಸುದ್ದಿಗಳು ಬೆಂಗಳೂರು: ದೀಪಾವಳಿ ಪಟಾಕಿಯಿಂದ 50 ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು: ದೀಪಾವಳಿ ಪಟಾಕಿಯಿಂದ 50 ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಪಟಾಕಿ ಸಿಡಿತದಿಂದ ಗಾಯಗೊಂಡು ಆಸ್ಪತ್ರೆ ಸೇರುವವರ ಸಂಖ್ಯೆ ಏರಿಕೆಯಾಗಿದೆ.

ಶುಕ್ರವಾರದ ಅಂತ್ಯಕ್ಕೆ ನಗರದ ಆಸ್ಪತ್ರೆಯಲ್ಲಿ 50 ಕ್ಕೂ ಅಧಿಕ ಮಂದಿಗೆ ಹಾನಿಯಾಗಿದೆ.

ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಶುಕ್ರವಾರ 11 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ 7 ಮಂದಿ ಹೊರ ರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದರೆ, 4 ಜನರಿಗೆ ಒಳ ರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ಟೋಬರ್ 29 ರಿಂದ ಈವರೆಗೆ ಮಿಂಟೋ ಆಸ್ಪತ್ರೆಯಲ್ಲಿ 21 ಜನರಿಗೆ ಚಿಕಿತ್ಸೆ ನೀಡಲಾಗಿದೆ.

ಒಳರೋಗಿ ವಿಭಾಗದಲ್ಲಿನ ನಾಲ್ಕು ಜನರಿಗೂ ಗಂಭೀರ ಗಾಯವಾಗಿದ್ದು, ಒಬ್ಬರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಪಟಾಕಿ ಸಿಡಿಸುವಾಗ ನೋಡುತ್ತಿದ್ದಾಗ ಗಾಯಗೊಂಡವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ,” ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Join Whatsapp
Exit mobile version