ಬೆಂಗಳೂರು: ತಾಯಿ, ಮಗನ ಬರ್ಬರ ಹತ್ಯೆ

Prasthutha|

ಬೆಂಗಳೂರು: ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ.

- Advertisement -

ನವನೀತಾ(33), ಸೃಜನ್(11) ಕೊಲೆಯಾದವರು.

ನಿನ್ನೆ(ಸೆಪ್ಟೆಂಬರ್ 05) ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಗುಂಟೆ ಪೊಲೀಸರು ಇದೀಗ ಪರಾರಿಯಾದ ಚಂದ್ರು ಪತ್ತೆಗಾಗಿ ಶೋಧ ನಡೆಸಿದ್ದಾರೆ.

- Advertisement -


ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಪತಿ ಚಂದ್ರುವೇ ಕೊಂದಿರಬಹುದೆಂದು ಮೃತ ನವನೀತಾ ಕುಟುಸ್ಥರು ಅರೋಪಿಸಿದ್ದಾರೆ. ಕೊಲೆಯಾದ ಮಹಿಳೆ ಆಂಧ್ರ ಪ್ರದೇಶ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರವೀಂದ್ರ ನಗರದಲ್ಲಿ ವಾಸವಿದ್ದರು



Join Whatsapp