ಬೆಂಗಳೂರು: ಮುನವ್ವರ್ ಫಾರೂಖಿ ಕಾರ್ಯಕ್ರಮಕ್ಕೆ ಮತ್ತೊಮ್ಮೆ ಅನುಮತಿ ನಿರಾಕರಣೆ

Prasthutha|

ಬೆಂಗಳೂರು: ಇಂದು ನಡೆಯಬೇಕಿದ್ದ ಸ್ಟಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಅವರ ‘ಡೋಂಗ್ರಿ ಟು ನೌವೇರ್’ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಮತ್ತೊಮ್ಮೆ ಅನುಮತಿ ನಿರಾಕರಿಸಿದ್ದಾರೆ.

- Advertisement -

ಬೆಂಗಳೂರಿನ ಜೆಪಿ ನಗರದ ಸಭಾಂಗಣವೊಂದರಲ್ಲಿ ಈ ಕಾರ್ಯಕ್ರಮವನ್ನು ನಿಗದಿಪಡಿಲಾಗಿತ್ತು.

ನಗರದಲ್ಲಿ ಕಾರ್ಯಕ್ರಮ ಆಯೋಜಿಸಲು ಸಂಘಟಕರು ಅನುಮತಿ ಪಡೆಯದ ಕಾರಣ ಇದನ್ನು ರದ್ದುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈ ಶ್ರೀರಾಮ ಸೇನೆ ಎಂಬ ಹೆಸರಿನ ಸಂಘಟನೆ ಹಾಸ್ಯನಟ ಮತ್ತು ಸಂಘಟಕರ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿತ್ತು.

- Advertisement -

ತನ್ನ ಶೋಗಳಲ್ಲಿ ರಾಮ ಮತ್ತು ಸೀತಾ ದೇವಿಯ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಫಾರುಕಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಂಘಟನೆಯು ತನ್ನ ದೂರಿನಲ್ಲಿ ಆರೋಪಿಸಿದೆ.

2021 ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರದರ್ಶನ ನೀಡಲು ಹಾಸ್ಯನಟನಿಗೆ ಅನುಮತಿ ನಿರಾಕರಿಸಲಾಗಿತ್ತು.

Join Whatsapp