Home ಟಾಪ್ ಸುದ್ದಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಟೋಲ್ ಸಂಗ್ರಹವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಾರ್ಚ್ 14ಕ್ಕೆ ಮುಂದೂಡಿದೆ.

ಮಂಗಳವಾರದಿಂದ (ಫೆ.28) ಕಣಮಿಣಕೆ ಹಾಗೂ
ಶೇಷಗಿರಿಹಳ್ಳಿ ಟೋಲ್‌ಗಳಲ್ಲಿ ವಾಹನ ಸವಾರರಿಂದ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು.
ಆದರೆ, ಉದ್ಘಾಟನೆಗೂ ಮುನ್ನವೇ ಟೋಲ್ ಆರಂಭಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದೆ.

ಟೋಲ್ ಶುಲ್ಕ ದುಬಾರಿ ಎಂಬ ದೂರುಗಳ ಹಿನ್ನೆಲೆಯಲ್ಲಿ ಪ್ರಾಧಿಕಾರವು ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಪ್ರತಿಭಟನೆ ಎಚ್ಚರಿಕೆ ಹಿನ್ನೆಲೆಯಲ್ಲಿ ಎರಡು ಟೋಲ್ ಕೇಂದ್ರಗಳಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

Join Whatsapp
Exit mobile version