Home ಟಾಪ್ ಸುದ್ದಿಗಳು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅವೈಜ್ಞಾನಿಕವಾಗಿ ನಿರ್ಮಾಣ: ಎಂ. ಲಕ್ಷ್ಮಣ

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅವೈಜ್ಞಾನಿಕವಾಗಿ ನಿರ್ಮಾಣ: ಎಂ. ಲಕ್ಷ್ಮಣ

ಮೈಸೂರು: ಹೊಸತಾಗಿ ನಿರ್ಮಾಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದ್ದಾರೆ.


ಹೆದ್ದಾರಿ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಹೆದ್ದಾರಿಯಲ್ಲಿ ಇದುವರೆಗೆ 300 ಅಪಘಾತಗಳು ಸಂಭವಿಸಿವೆ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣವಾಗಿದೆ. 2 ಲಕ್ಷ ಜನರಿಗೆ ಈ ರಸ್ತೆಯಿಂದ ಅನಾನುಕೂಲ ಆಗುತ್ತಿದೆ ಎಂದು ಹೇಳಿದ್ದಾರೆ. 55 ಕಿಲೋಮೀಟರ್’ಗೆ 155 ರೂ ಟೋಲ್ ನಿಗದಿಯಾಗಿದೆ. 55 ಕಿಲೋಮೀಟರ್’ಗೆ 155 ರೂ. ನಿಗದಿಪಡಿಸಲಾಗಿದೆ. ಅಲ್ಲಿಗೆ ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ಅಲ್ಲಿಗೆ ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ ಎಂದರು.


10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲಿಗೆ 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಅಲ್ಲಿಗೆ 8 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ಟೋಲ್ ವಸೂಲಿಯಾದಂತಾಗಲಿದೆ. ಇದರಲ್ಲಿ ನಿಮಗೆ ಎಷ್ಟು ಕಮಿಷನ್ ಬಂದಿದೆ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version