Home ಟಾಪ್ ಸುದ್ದಿಗಳು ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇ ಟೋಲ್ ದರ ಹೆಚ್ಚಳ: ಪ್ರತಾಪ್ ಸಿಂಹ ಸಮರ್ಥನೆ

ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇ ಟೋಲ್ ದರ ಹೆಚ್ಚಳ: ಪ್ರತಾಪ್ ಸಿಂಹ ಸಮರ್ಥನೆ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇ ಟೋಲ್ ದರ ಸದ್ದಿಲ್ಲದೇ ಏರಿಕೆಯಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.


ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದು, ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆ ಆಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದರು.


ಕೆಇಆರ್ ಸಿ ವಿದ್ಯುತ್ ದರ ಏರಿಕೆ ಮಾಡಲು ಶಿಫಾರಸು ಮಾಡಿತ್ತು. ಅದನ್ನು ತಡೆಯುವ, ತಿರಸ್ಕರಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇದೆ. ಗುತ್ತಿಗೆದಾರರ ಅನುದಾನ ಬಿಡುಗಡೆ ಆದೇಶಕ್ಕೆ ತಡೆ ಹಿಡಿಯುತ್ತೀರಿ. ಆದರೆ, ವಿದ್ಯುತ್ ಬಿಲ್ ಆದೇಶಕ್ಕೆ ಏಕೆ ತಡೆ ನೀಡಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

Join Whatsapp
Exit mobile version