2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ. ಬಿ.ಪಾಟೀಲ್

Prasthutha|

ಬೆಂಗಳೂರು: 2035 ರೊಳಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯ ವಿಷಯದಲ್ಲಿ ತನ್ನ ಸಾಮರ್ಥ್ಯದ ಪೀಕ್ ಗೆ ಹೋಗಲಿದೆ. ಅಷ್ಟರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಬೇಕು ಎಂದು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಮಂಗಳವಾರ ವಿಧಾನಪರಿಷತ್ ನಲ್ಲಿ ಹೇಳಿದ್ದಾರೆ.

- Advertisement -


ಪ್ರಶ್ನೋತ್ತರ ವೇಳೆಯಲ್ಲಿ ಅವರು, ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ ಎಂದರು.


2035 ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮರ್ಥ್ಯ 110 ಮಿಲಿಯನ್ ಪ್ರಯಾಣಿಕರು ಮತ್ತು 1.10 ಮಿಲಿಯನ್ ಟನ್ ಸರಕು ಸಾಗಣೆಯ ಫೀಕ್ ಗೆ ತಲುಪಲಿದೆ. ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು, ಹೀಗಾಗಿ ರಾಜ್ಯ ಸರ್ಕಾರದ ಮುಂಚಿತವಾಗಿ ಯೋಜನೆ ರೂಪಿಸುತ್ತಿದೆ. 2033ರವರೆಗೂ ಮತ್ತೊಂದುವಿಮಾನ ನಿಲ್ದಾಣ ಬೇಡ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಹೇಳಿರುವುದಾಗಿ ಅವರು ತಿಳಿಸಿದರು.



Join Whatsapp