ಬೆಂಗಳೂರು:ಇದೇ ಮೊದಲ ಬಾರಿಗೆ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲೆಯ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.
ಐದು ವರ್ಷ ಒಂದೇ ಠಾಣೆಯಲ್ಲಿದ್ದವರಿಗೆ ಇಲಾಖೆ ವರ್ಗಾವಣೆ ಮಾಡಿದೆ. ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ನಿಂದ ಹಿಡಿದು ಕಾನ್ಸ್ಟೇಬಲ್ ವರೆಗೂ ವರ್ಗಾವಣೆ ಮಾಡಿ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.
1,749 ಕಾನ್ಸ್ಟೇಬಲ್, 1,292 ಹೆಡ್ ಕಾನ್ಸ್ಟೇಬಲ್, 43 ಎಎಸ್ಐ ಹಾಗೂ 163 ಪಿಎಸ್ಐಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಮಟ್ಟದ ವರ್ಗಾವಣೆ ಇಲಾಖೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.