ಬೆಂಗಳೂರು ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ: ಬಾಲಕ ವಶಕ್ಕೆ

Prasthutha|

ಬೆಂಗಳೂರು:  ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಾಲಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇ-ಮೇಲ್ ಕಳುಹಿಸಿದ್ದು ಆತನೇ ಎಂಬ ಮಾಹಿತಿ ತನಿಖೆಯಿಂದ ತಿಳಿದು ಬಂದಿದೆ.

- Advertisement -

ದುಷ್ಕರ್ಮಿಗಳು ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್  ಇಡುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಹಾಕಿದ್ದರು.ಇ-ಮೇಲ್ ನಲ್ಲಿ ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಮನಿಸಿದ ಆಡಳಿತ ಮಂಡಳಿಯ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ಪರಿಶೀಲನೆ ನಡೆಸಿದ್ದು ಅದೊಂದು ಹುಸಿ ಕರೆ ಎನ್ನುವುದು ಪತ್ತೆಯಾಗಿದೆ. 

‘ಬಾಂಬ್ ಬೆದರಿಕೆ ಸಂಬಂಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಹೆಸರು ಬಹಿರಂಗಪಡಿಸಲಾಗದು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಹೇಳಿದರು.

Join Whatsapp