ಬೆಂಗಳೂರು: ಸಾಮಾನ್ಯ ನಾಗರಿಕನಂತೆ ಬಸ್’ನಲ್ಲಿ ರಾಹುಲ್ ಗಾಂಧಿ ಸಂಚಾರ

Prasthutha|

ಬೆಂಗಳೂರು: ಇಂದು ಸಂಜೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ವಿವಿಧ ಪಕ್ಷದ ನಾಯಕರು ಗೆಲುವು ಸಾಧಿಸಲು ವಿವಿಧ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಸೋಮವಾರ ಬೆಳಗ್ಗೆ ರಾಹುಲ್ ಗಾಂಧಿ ಅವರು ಬಿಎಂಟಿಸಿ ಬಸ್ ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -


ಕನ್ನಿಂಗ್ ಹ್ಯಾಮ್ ರಸ್ತೆಯಿಂದ ರಾಮಮೂರ್ತಿ ನಗರ ಕಡೆ ಹೋಗುತ್ತಿದ್ದ ಬಸ್ ನಲ್ಲಿ ರಾಹುಲ್ ಗಾಂಧಿ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುತ್ತಲೇ ಸಾರ್ವಜನಿಕರಂತೆ ಬಸ್ನಲ್ಲಿ ಪ್ರಯಾಣಿಸಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ ನಲ್ಲೇ ಪ್ರಯಾಣ ಬೆಳೆಸಿದ್ದಾರೆ.